Delhi Firing Two killed; ದೆಹಲಿ ಗುಂಡಿನ ದಾಳಿಗೆ ಇಬ್ಬರು ಬಲಿ
Delhi Firing Two killed: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಧ್ಯರಾತ್ರಿ ಗುಂಡಿನ ಚಕಮಕಿ ನಡೆದಿದೆ
Delhi Firing Two killed: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಧ್ಯರಾತ್ರಿ ಗುಂಡಿನ ಚಕಮಕಿ ನಡೆದಿದೆ. ಜೆಜೆ ಕಾಲೋನಿಯಲ್ಲಿ ಗುಂಡಿನ ಸದ್ದು ಮೊಳಗಿದೆ. ಅಪರಿಚಿತ ವ್ಯಕ್ತಿಗಳು ಬಂದೂಕುಗಳಿಂದ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದ ಇಬ್ಬರು ವ್ಯಕ್ತಿಗಳು ಮನೆಗೆ ನುಗ್ಗಿ ಈ ದುಷ್ಕೃತ್ಯ ಎಸಗಿದ್ದಾರೆ.
ಆ ಮನೆಯಲ್ಲಿ ಟಿವಿ ನೋಡುತ್ತಿದ್ದ ಮೂವರ ಮೇಲೆ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಆರೋಪಿಗಳ ಪತ್ತೆ ಕಾರ್ಯ ನಡೆಸುತ್ತಿದ್ದಾರೆ. ಗುಂಡಿನ ದಾಳಿ ಏಕೆ ನಡೆದಿದೆ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಸಂತ್ರಸ್ತರಿಗೆ ಯಾರೊಂದಿಗೂ ಜಗಳವಿಲ್ಲ ಎನ್ನುತ್ತಾರೆ ಸ್ಥಳೀಯರು.
Follow us On
Google News |
Advertisement