Welcome To Kannada News Today

ಡಬಲ್ ಮರ್ಡರ್, ಎಣ್ಣೆ ಪಾರ್ಟಿ ಬಳಿಕ ಸ್ನೇಹಿತರಿಂದಲೇ ಕೊಲೆ ಶಂಕೆ

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸಿಂಗೇನಾ ಅಗ್ರಹಾರ ಸಮೀಪದ ನಿರ್ಜನ ಪ್ರದೇಶದಲ್ಲಿ ದುಷ್ಕರ್ಮಿಗಳು ಇಬ್ಬರು ಅಪರಿಚಿತ ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಂದು ಪರಾರಿಯಾಗಿದ್ದಾರೆ.

🌐 Kannada News :

ಸುಮಾರು 25 ರಿಂದ 30 ವರ್ಷ ವಯೋಮಾನದ ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರಲ್ಲಿ ಓರ್ವ ವ್ಯಕ್ತಿ ಸಂಪಿಗೆನಗರದ ವಾಸಿ ರವಿ ಕುಮಾರ್ ಎಂದು ಗುರುತಿಸಲಾಗಿದ್ದು, ಮತ್ತೊರ್ವ ವ್ಯಕ್ತಿ ಉತ್ತರ ಭಾರತ ಮೂಲದವನೆಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸಿಂಗೇನಾ ಅಗ್ರಹಾರ ಸಮೀಪದ ನಿರ್ಜನ ಪ್ರದೇಶದಲ್ಲಿ ದುಷ್ಕರ್ಮಿಗಳು ಇಬ್ಬರು ಅಪರಿಚಿತ ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇನ್ನು, ಘಟನಾ ಸ್ಥಳದಲ್ಲಿ ಕಂಡು ಬಂದ ಮದ್ಯದ ಬಾಟಲಿಗಳು ಎಣ್ಣೆ ಪಾರ್ಟಿ ಬಳಿಕ ಸ್ನೇಹಿತರಿಂದಲೇ ಡಬಲ್ ಮರ್ಡರ್ ಆಗಿರುವ ಸಾಧ್ಯತೆ ಇದೆ ಎನ್ನುವಂತಿದೆ.

ಕೊಲೆಗಾರರನ್ನು ಪತ್ತೆ ಹಚ್ಚಲು ಮೂರು ಪೊಲೀಸ್ ತಂಡಗಳನ್ನು ರಚನೆ ಮಾಡಲಾಗಿದೆ. ಸದ್ಯ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಮೃತರು ಮತ್ತು ಆರೋಪಿಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ.