ರಾಸಾಯನಿಕ ಕಾರ್ಖಾನೆ ಸ್ಫೋಟ.. ಮೂವರು ಬಲಿ, 15 ಮಂದಿ ಗಾಯ
ಗುಜರಾತ್ ರಾಜ್ಯದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ.
ಅಹಮದಾಬಾದ್: ಗುಜರಾತ್ ರಾಜ್ಯದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ. ಪಂಚಮಹಲ್ ಜಿಲ್ಲೆಯ ಫ್ಲೋರೋ ಕೆಮಿಕಲ್ಸ್ ಕಾರ್ಖಾನೆಯಲ್ಲಿ ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಭಾರೀ ಸ್ಫೋಟ ಸಂಭವಿಸಿದೆ. ಘೋಘಂಬಾ ತಾಲೂಕಿನ ರಂಜಿತ್ನಗರ ಗ್ರಾಮದ ಬಳಿ ಇರುವ ಗುಜರಾತ್ ಫ್ಲೋರೊಕೆಮಿಕಲ್ಸ್ ಲಿಮಿಟೆಡ್ (ಜಿಎಫ್ಎಲ್) ರಾಸಾಯನಿಕ ಘಟಕದಲ್ಲಿ ಸ್ಫೋಟದ ಸದ್ದು ಕಿಲೋಮೀಟರ್ವರೆಗೆ ಕೇಳಿಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ ಎಂದು ಪಂಚಮಮಲ್ ಎಸ್ಪಿ ಲೀನಾ ಪಾಟೀಲ್ ತಿಳಿಸಿದ್ದಾರೆ. ಸ್ಫೋಟದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಕೆಲವರಿಗೆ ತೀವ್ರ ಸುಟ್ಟ ಗಾಯಗಳಾಗಿವೆ.
Follow Us on : Google News | Facebook | Twitter | YouTube