ಜಮೀನಿನಲ್ಲಿ ಹಾವು ಕಚ್ಚಿ ರೈತ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ರೈತರೊಬ್ಬರು ಮೃತಪಟ್ಟ ಘಟನೆ ಎಚ್.ಡಿ.ಕೋಟೆ ತಾಲೂಕಿನ ಎಚ್. ಮಟಕೆರೆ ಗ್ರಾಮದಲ್ಲಿ ನಡೆದಿದೆ

(Kannada News) : ಮೈಸೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ರೈತರೊಬ್ಬರು ಮೃತಪಟ್ಟ ಘಟನೆ ಎಚ್.ಡಿ.ಕೋಟೆ ತಾಲೂಕಿನ ಎಚ್. ಮಟಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ರೈತ ಕೃಷ್ಣಶೆಟ್ಟಿ(೫೩) ಎಂಬುವರೇ ಹಾವು ಕಚ್ಚಿ ಮೃತಪಟ್ಟ ದುರ್ದೈವಿ. ಇವರು ಎಂದಿನಂತೆ ಜಮೀನಿಗೆ ತೆರಳಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಾವು ಅವರಿಗೆ ಕಡಿದಿದೆ.

ರೈತ ಕೃಷ್ಣಶೆಟ್ಟಿ
ರೈತ ಕೃಷ್ಣಶೆಟ್ಟಿ

ಆದರೆ ಹಾವು ಕಡಿದ ಬಗ್ಗೆ ಅರಿವಿಲ್ಲದ ಅವರು, ಮನೆಗೆ ಬರುವ ಸಂದರ್ಭದಲ್ಲಿ ಗ್ರಾಮದ ಅಂಗಡಿಯೊಂದರ ಬಳಿ ಕುಸಿದು ಬಿದ್ದಿದ್ದಾರೆ. ಕೂಡಲೇ ಗ್ರಾಮಸ್ಥರು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತರುವ ಪ್ರಯತ್ನ ಮಾಡಿದ್ದಾರೆ. ಆದರೆ ಅವರು ಮಾರ್ಗ ಮಧ್ಯದಲ್ಲೇ ಮೃತ ಪಟ್ಟಿದ್ದಾರೆ.

ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ನಂತರ, ವಾರಸುದಾರರಿಗೆ ಶವವನ್ನು ಒಪ್ಪಿಸಲಾಯಿತು.

ಈ ಸಂಬಂದ ಎಚ್.ಡಿ.ಕೋಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Web Title : Farmer death by snake bite in Mysore