ತೈವಾನ್ ನಲ್ಲಿ ಬೆಂಕಿ ಅವಘಡ, 46 ಜನರು ಸಜೀವ ದಹನ

ತೈವಾನ್ ನಲ್ಲಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ. ಹತ್ತಾರು ಮಂದಿ ಗಾಯಗೊಂಡಿದ್ದಾರೆ. ಇಂದು (ಗುರುವಾರ) ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕಾವೋಶಿಯುಂಗ್ ನಗರದ 13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ತೈವಾನ್ ನಲ್ಲಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ. ಹತ್ತಾರು ಮಂದಿ ಗಾಯಗೊಂಡಿದ್ದಾರೆ. ಇಂದು (ಗುರುವಾರ) ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕಾವೋಶಿಯುಂಗ್ ನಗರದ 13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದರು ಮತ್ತು ಪೊಲೀಸರು ಸುಮಾರು 55 ಜನರನ್ನು ಆಸ್ಪತ್ರೆಗೆ ಸೇರಿಸಿದರು. ಈ ಪೈಕಿ 14 ಜನರ ಸ್ಥಿತಿ ಗಂಭೀರವಾಗಿದೆ.

ಬೆಂಕಿ ಭೀಕರತೆ ಹೆಚ್ಚಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡದ ಬಹುತೇಕ ಮಹಡಿಗಳು ಸಂಪೂರ್ಣ ನಾಶವಾಗಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಕಟ್ಟಡದಿಂದ ದೊಡ್ಡ ಪ್ರಮಾಣದ ಬೆಂಕಿ ಹೊತ್ತಿಕೊಳ್ಳುವ ವಿಡಿಯೋಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಆ ಪ್ರದೇಶದಲ್ಲಿ ಹೊಗೆ ದಟ್ಟವಾಗಿ ಆವರಿಸಿತ್ತು. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರ ಸಾಹಸ ಪಡಬೇಕಾಯಿತು.

ಅಪಘಾತದ ಕಾರಣ ತಿಳಿದಿಲ್ಲ. ಆದಾಗ್ಯೂ, ಮುಂಜಾನೆ ಮೂರು ಗಂಟೆಯ ಸುಮಾರಿಗೆ ಆ ಪ್ರದೇಶದಲ್ಲಿ ದೊಡ್ಡ ಸ್ಫೋಟದ ಸದ್ದು ಕೇಳಿಸಿತು ಎಂದು ಪ್ರತ್ಯಕ್ಷದರ್ಶಿಗಳು ಉಲ್ಲೇಖಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಉಲ್ಲೇಖಿಸಿವೆ. ಕಟ್ಟಡವು 40 ವರ್ಷಗಳಷ್ಟು ಹಳೆಯದಾಗಿದ್ದು, ನೆಲಮಹಡಿಯಲ್ಲಿ ಅಂಗಡಿಗಳು ಮತ್ತು ಮೇಲ್ಭಾಗದಲ್ಲಿ ಅಪಾರ್ಟ್‌ಮೆಂಟ್‌ಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.