ಉತ್ತರ ಪ್ರದೇಶದಲ್ಲಿ 5 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರ

Story Highlights

ಉತ್ತರ ಪ್ರದೇಶದಲ್ಲಿ ದುಷ್ಕೃತ್ಯವೊಂದು ನಡೆದಿದೆ. ಐದು ವರ್ಷದ ಬಾಲಕಿಯ ಮೇಲೆ ಆಕೆಯ ಮನೆಯ ಬಾಡಿಗೆದಾರರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಲಕ್ನೋ: ಉತ್ತರ ಪ್ರದೇಶದಲ್ಲಿ ದುಷ್ಕೃತ್ಯವೊಂದು ನಡೆದಿದೆ. 5 ವರ್ಷದ ಬಾಲಕಿಯ ಮೇಲೆ ಆಕೆಯ ಮನೆಯ ಬಾಡಿಗೆದಾರರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. 6 ವರ್ಷ, 13 ವರ್ಷ ಹಾಗೂ 16 ವರ್ಷದ ಮೂವರು ಬಾಲಕರು ಬಾಲಕಿಯನ್ನು ಮನೆಯ ಮೇಲಕ್ಕೆ ಕರೆದುಕೊಂಡು ಹೋಗಿ ಈ ದುಷ್ಕೃತ್ಯ ಎಸಗಿದ್ದಾರೆ.

ಬಲ್ಲಿಯಾ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ.

ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ಶನಿವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ BNS ಮತ್ತು POCSO ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Five Years Old Girl Raped By Three Boys In Uttar Pradesh

Related Stories