ಮಾಜಿ ಸಚಿವೆ ಉಮಾಶ್ರೀ ಮನೆ ಬಾಗಿಲು ಮುರಿದು ಕಳ್ಳತನ

ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ವಿದ್ಯಾನಗರದಲ್ಲಿರುವ ಮಾಜಿ ಸಚಿವೆ ಉಮಾಶ್ರೀ ಅವರ ಮನೆಯ ಬಾಗಿಲು ಮುರಿದು ಕಳ್ಳತನ ಮಾಡಲಾಗಿದೆ

( Kannada News Today ) ಬಾಗಲಕೋಟೆ : ಮಾಜಿ ಸಚಿವೆ ಉಮಾಶ್ರೀ ಮನೆ ಬಾಗಿಲು ಮುರಿದು ಕಳ್ಳತನ : ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ವಿದ್ಯಾನಗರದಲ್ಲಿರುವ ಮಾಜಿ ಸಚಿವೆ ಉಮಾಶ್ರೀ ಅವರ ಮನೆಯ ಬಾಗಿಲು ಮುರಿದು ಕಳ್ಳತನ ಮಾಡಲಾಗಿದೆ.

ರವಿವಾರ ತಡರಾತ್ರಿ ಮಾಜಿ ಸಚಿವೆ ಉಮಾಶ್ರೀ ಮನೆಗೆ ಕನ್ನ ಹಾಕಲಾಗಿದ್ದು, ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿರುವ ಕಳ್ಳರು ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ಹಣ ಕದ್ದೊಯ್ದಿದ್ದಾರೆ.

ಈ ವಿಷಯ ತಿಳಿಯುತ್ತಿದ್ದಂತೆ ಮಾಜಿ ಸಚಿವೆ ಉಮಾಶ್ರೀ ಬೆಂಗಳೂರಿನಿಂದ ಬಾಗಲಕೋಟೆಗೆ ಧಾವಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ರಬಕವಿ ಪಟ್ಟಣದ ವಿದ್ಯಾನಗರದಲ್ಲಿರೋ ಉಮಾಶ್ರೀ ಮನೆ ಬೀಗ ಒಡೆದು ತಡರಾತ್ರಿ ಖದೀಮರು
ಕಳ್ಳತನ ಮಾಡಿದ್ದಾರೆ. ಮನೆಯೊಳಗಿನ ಟ್ರಿಜರಿ ಒಡೆದು ಹಾಕಿ ಒಡವೆ ಸಹಿತ ಹಣ ಕದ್ದೊಯ್ದಿರುವ ಅನುಮಾನ ವ್ಯಕ್ತವಾಗಿದೆ.

ಬೆಂಗಳೂರಿನಿಂದ ಉಮಾಶ್ರೀ ಬಂದ ಬಳಿಕವೇ ಕದ್ದೊಯ್ದಿರೋ ವಸ್ತುಗಳ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಸಿಪಿಐ ಕರುಣೇಗೌಡ ಪರಿಶೀಲನೆ ನಡೆಸಿದ್ದಾರೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಎಷ್ಟು ಹಣ, ಚಿನ್ನಾಭರಣಗಳು ಕಳ್ಳತನವಾಗಿದೆ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

Scroll Down To More News Today