Road Accident caught on camera, ಬ್ರೇಕ್ ಫೇಲ್ ಲಾರಿ ಡಿಕ್ಕಿಯಾಗಿ ನಾಲ್ವರು ಸಾವು

ಜಾರ್ಖಂಡ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಮಗಢ (Road Accident Video) : ಜಾರ್ಖಂಡ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮಗಢದ ಪಟೇಲ್ ಚೌಕ್‌ನಲ್ಲಿ ಭಾರೀ ಟ್ರಕ್ ಬ್ರೇಕ್ ಫೇಲ್ ನಿಯಂತ್ರಣ ಕಳೆದುಕೊಂಡು ಈ ಅವಘಡ ಸಂಭವಿಸಿದೆ.

ಎದುರಿಗೆ ಬಂದ ಪ್ರತಿ ವಾಹನಗಳನ್ನು ಡಿಕ್ಕಿ ಹೊಡೆದು ಮುಂದೆ ಸಾಗಿದೆ… ಟ್ರಕ್‌ನಿಂದ ಹಲವಾರು ವಾಹನಗಳು ಜಖಂಗೊಂಡವು… ಸ್ಥಳಕ್ಕೆ ಆಗಮಿಸಿದ ಪೊಲೀಸರು ಜೆಸಿಬಿ ಸಹಾಯದಿಂದ ಲಾರಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಘಟನೆಯಲ್ಲಿ ಆರು ವಾಹನಗಳು ಜಖಂಗೊಂಡಿವೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿವೆ.

Follow Us on : Google News | Facebook | Twitter | YouTube