ಕುಡಿದ ಅಮಲಿನಲ್ಲಿ ಮಹಿಳೆಗೆ ಬೆಂಕಿ ಹಚ್ಚಿದ ನಾಲ್ವರು ವ್ಯಕ್ತಿಗಳು

ಮಧ್ಯಪ್ರದೇಶದಲ್ಲಿ ಧಾರುಣ ಘಟನೆಯೊಂದು ನಡೆದಿದೆ. ಮದ್ಯದ ಅಮಲಿನಲ್ಲಿದ್ದ ನಾಲ್ವರು ಮಹಿಳೆಗೆ ಬೆಂಕಿ ಹಚ್ಚಿದ್ದಾರೆ. ಈ ಭಯಾನಕ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ನೀಡಿರುವ ವಿವರಗಳ ಪ್ರಕಾರ ಜೂನ್ 28ರಂದು ಮಧು ಎಂಬ ಮಹಿಳೆಯ ಮನೆಯ ಹೊರಗೆ ಅಮಿತ್ ರಾಯ್ ಎಂಬ ವ್ಯಕ್ತಿ ನಿಂತಿದ್ದ. ಆತನನ್ನು ಗಮನಿಸಿದ ಆಕೆ ಅವನನ್ನು ಅಲ್ಲಿಂದ ಹೊರಡಲು ಹೇಳಿದ್ದಾರೆ.

ಇದರಿಂದ ಕುಪಿತಗೊಂಡ ಅಮಿತ್ ರಾಯ್ ಇತರ ಮೂವರು ಸ್ನೇಹಿತರೊಂದಿಗೆ ಸೇರಿ ಮಹಿಳೆಗೆ ಬೆಂಕಿ ಹಚ್ಚಿದ್ದಾರೆ. ಮದ್ಯದ ಅಮಲಿನಲ್ಲಿ ನಾಲ್ವರು ಮಹಿಳೆಗೆ ಬೆಂಕಿ ಹಚ್ಚಿದ್ದಾರೆ. ಸ್ಥಳೀಯರು ಬೆಂಕಿ ನಂದಿಸಿ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ವೈದ್ಯರು ಆಕೆಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿಯನ್ನು ಅಮಿತ್ ರಾಯ್ ಎಂದು ಗುರುತಿಸಲಾಗಿದ್ದು, ಮಹಿಳೆಯನ್ನು ಮಧು ಎಂದು ಗುರುತಿಸಲಾಗಿದೆ. ಆರೋಪಿಗಳು ಮದ್ಯದ ಅಮಲಿನಲ್ಲಿ ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ.

Four Men Set Fire To A Woman In Madhya Pradesh

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ