ವಿಜಯಪುರ: ಕೆಎಸ್ಆರ್​ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸಾವು

ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ, ವಿಜಯಪುರ ಸಮೀಪದ ಜುಮನಾಳ ಕ್ರಾಸ್ ಬಳಿ ಭಾನುವಾರ ಕೆಎಸ್‌ಆರ್ ಟಿಸಿ ಬಸ್ ಹಾಗೂ ಫಾರ್ಚುನರ್ ಕಾರು ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ.

ವಿಜಯಪುರ (Vijayapura): ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ, ವಿಜಯಪುರ ಸಮೀಪದ ಜುಮನಾಳ ಕ್ರಾಸ್ ಬಳಿ ಭಾನುವಾರ ಕೆಎಸ್‌ಆರ್ ಟಿಸಿ ಬಸ್ ಹಾಗೂ ಫಾರ್ಚುನರ್ ಕಾರು ಡಿಕ್ಕಿಯಾಗಿ (KSRTC Bus and Car Accident) ನಾಲ್ವರು ಮೃತಪಟ್ಟಿದ್ದಾರೆ.

ಮೃತರಲ್ಲಿ ಒಬ್ಬರ ಗುರುತು ಸಿಕ್ಕಿದ್ದು, ಅವರನ್ನು ಚಿದಾನಂದ ಸೂರ್ಯವಂಶಿ (40) ಎಂದು ಗುರುತಿಸಲಾಗಿದ್ದು, ಉಳಿದ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ.

ಭಾನುವಾರ ಸಂಜೆ ವಿಜಯಪುರಕ್ಕೆ ಬರುತ್ತಿದ್ದ ಫಾರ್ಚುನರ್ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿದ್ದವರು ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ನರಗುಂದದಿಂದ ವಿಜಯಪುರಕ್ಕೆ ಆಗಮಿಸಿದ್ದರು. ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ಸಿನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ, ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಗೆ ಮೂಲ ಕಾರಣ ಇನ್ನೂ ತಿಳಿದುಬಂದಿಲ್ಲ.

Stay updated with us for all News in Kannada at Facebook | Twitter
Scroll Down To More News Today