ಹೈದರಾಬಾದ್: ಗ್ಯಾಸ್ ಸಿಲಿಂಡರ್ ಸ್ಫೋಟ ಓರ್ವ ಸಾವು

ವಸತಿ ಸಮುಚ್ಚಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಾನಕ್ರಮ್‌ಗುಡದಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಹೈದರಾಬಾದ್: ವಸತಿ ಸಮುಚ್ಚಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಾನಕ್ರಮ್‌ಗುಡದಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಇನ್ನೂ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೃತನ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುತ್ತಿಟ್ಟು. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಶಬ್ದ ಕೇಳಿ ಸ್ಥಳೀಯರು ಬೆಚ್ಚಿಬಿದ್ದಿದ್ದರು. ಈ ಘಟನೆ ಸದ್ಯ ಸ್ಥಳೀಯರಲ್ಲಿ ಸಂಚಲನ ಮೂಡಿಸಿದೆ