ಮಹಾರಾಷ್ಟ್ರದಲ್ಲಿ ಧಾರುಣ ಘಟನೆ ನಡೆದಿದೆ. ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಥಾಣೆ ಸಮೀಪದ ಕಲ್ಯಾಣ್‌ನಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸಂತ್ರಸ್ತೆಯ ಮೊಬೈಲ್ ಫೋನ್‌ನಿಂದ ಆತ್ಮಹತ್ಯೆ ಪತ್ರವನ್ನು ಪೊಲೀಸರು ಪತ್ತೆ ಹಚ್ಚಿರುವುದು ಆಕೆ ವರ್ಷಗಳಿಂದ ಎದುರಿಸುತ್ತಿರುವ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಒತ್ತಡವನ್ನು ಎತ್ತಿ ತೋರಿಸಿದೆ. ಘಟನೆಗೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳು ಆಕೆಯ ಆಕ್ಷೇಪಾರ್ಹ ವಿಡಿಯೋ ತೆಗೆದು ಬ್ಲಾಕ್ ಮೇಲ್ ಮಾಡಿದ್ದಾರೆ. ಅವಳನ್ನು ವೇಶ್ಯಾವಾಟಿಕೆಗೆ ಬಲವಂತಪಡಿಸಲಾಗಿದೆ. ಸಂತ್ರಸ್ತೆಯ ಸ್ನೇಹಿತ ಮತ್ತು ಇತರ ಏಳು ಮಂದಿ ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಆರೋಪಿಗಳನ್ನು ಸನ್ನಿ ಪಾಂಡೆ, ವಿಜಯ್ ಯಾದವ್, ಪ್ರಿಯಂ ತಿವಾರಿ, ಶಿವಂ ಪಾಂಡೆ, ಕೃಷ್ಣ ಜೈಸ್ವಾಲ್, ಆನಂದ್ ದುಬೆ, ನಿಖಿಲ್ ಮಿಶ್ರಾ ಮತ್ತು ಕಾಜಲ್ ಜೈಸ್ವಾಲ್ ಎಂದು ಗುರುತಿಸಲಾಗಿದೆ. ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.
ಆತ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಂತರ ಆಕೆಯನ್ನು ಬ್ಲಾಕ್ ಮೇಲ್ ಮಾಡಿ ಟೆರೇಸ್ ನಿಂದ ತಳ್ಳಿದ್ದಾನೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಅವರ ಕುಟುಂಬಕ್ಕೆ ಭದ್ರತೆ ಒದಗಿಸುವಂತೆ ಕೋರಿದ್ದಾರೆ.
Girl Who Has Been Sexually Abused For Over A Year Has Committed Suicide
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.