ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಸಂತ್ರಸ್ತೆ ವಿಷ ಸೇವಿಸಿ ಆತ್ಮಹತ್ಯೆ
ಹರಿಯಾಣದ ಫರಿದಾಬಾದ್ನಲ್ಲಿ ಅತ್ಯಾಚಾರ ಆರೋಪಿಗಳಿಗೆ ಜಾಮೀನು ದೊರೆತ ನಂತರ ಸಂತ್ರಸ್ತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂತ್ರಸ್ತೆಯ ತಂದೆಯ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮೃತಳ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ
ಹರಿಯಾಣದ ಫರಿದಾಬಾದ್ನಲ್ಲಿ ಅತ್ಯಾಚಾರ ಆರೋಪಿಗಳಿಗೆ ಜಾಮೀನು ದೊರೆತ ನಂತರ ಸಂತ್ರಸ್ತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂತ್ರಸ್ತೆಯ ತಂದೆಯ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮೃತಳ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
ಪೊಲೀಸ್ ಮಾಹಿತಿ ಪ್ರಕಾರ, ಸಂತ್ರಸ್ತೆಯ ತಂದೆ ಸೋಮವಾರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ, ತಮ್ಮ ಮಗಳು ಕೌರಲಿ ಗ್ರಾಮದ ಶಾಲೆಯಲ್ಲಿ ಓದುತ್ತಿದ್ದಾಳೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಫೆಬ್ರವರಿ 2 ರಂದು ಅಟಾಲಿ ಗ್ರಾಮದ ಸೌರಜ್ ಮತ್ತು ಗಡ್ಖೇಡಾ ನಿವಾಸಿ ನವೀನ್ ಅವರು ಮಗಳ ಮೇಲೆ ಅತ್ಯಾಚಾರವೆಸಗಿದ್ದರು. ಈ ಪ್ರಕರಣದಲ್ಲಿ ಆರೋಪಿಗಳಿಬ್ಬರೂ ಇಲ್ಲಿಯವರೆಗೆ ಜಿಲ್ಲಾ ಕಾರಾಗೃಹದಲ್ಲಿದ್ದರು.
ಸಂತ್ರಸ್ತೆಯ ತಂದೆಯ ಪ್ರಕಾರ, ಆರೋಪಿಗೆ ಜಾಮೀನು ಸಿಗುವ ಮಾಹಿತಿಯ ನಂತರ ಸಂತ್ರಸ್ತೆ ಅಸಮಾಧಾನಗೊಂಡಿದ್ದಾಳೆ. ಇದರಿಂದ ವಿಚಲಿತರಾದ ಆಕೆ ಭಾನುವಾರ ಸಂಜೆ ಮನೆಯಲ್ಲಿ ವಿಷ ಸೇವಿಸಿದ್ದಾಳೆ ಎನ್ನಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆಯನ್ನು ಸೆಕ್ಟರ್-8 ಸರ್ವೋದಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಮೃತಪಟ್ಟಿದ್ದಾರೆ.
Follow Us on : Google News | Facebook | Twitter | YouTube