ತಲೆ ಇಲ್ಲದ ಬಾಲಕಿಯ ಮೃತದೇಹ ಪತ್ತೆ

ತಲೆ ಇಲ್ಲದ ಬಾಲಕಿಯ ಮೃತದೇಹ ಯುಪಿಯಲ್ಲಿ ಸಂಚಲನ ಮೂಡಿಸಿದೆ. ಮೀರತ್‌ನ ರಸ್ತೆಯಲ್ಲಿ ತಲೆ ಇಲ್ಲದ ಬಾಲಕಿಯ ಮೃತದೇಹ ಪತ್ತೆಯಾಗಿದೆ.

ತಲೆ ಇಲ್ಲದ ಬಾಲಕಿಯ ಮೃತದೇಹ ಯುಪಿಯಲ್ಲಿ ಸಂಚಲನ ಮೂಡಿಸಿದೆ. ಮೀರತ್‌ನ ರಸ್ತೆಯಲ್ಲಿ ತಲೆ ಇಲ್ಲದ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ನಗರದ ಲಖಿಪುರ ಪ್ರದೇಶದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಲಿಸಾರಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಂದು ಪ್ರದೇಶದಲ್ಲಿ ಬಾಲಕಿಯನ್ನು ಕೊಂದು ಶವವನ್ನು ಲಖಿಪುರ ಪ್ರದೇಶದಲ್ಲಿ ಎಸೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ.

ಆ ಪ್ರದೇಶಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ. ಫೋರೆನ್ಸಿಕ್ ತಂಡ ಕೂಡ ಸ್ಥಳಕ್ಕೆ ಆಗಮಿಸಿದೆ.

ಇದುವರೆಗೂ ಬಾಲಕಿಯ ತಲೆ ಎಲ್ಲಿದೆ ಎಂಬುದನ್ನು ಪೊಲೀಸರು ಗುರುತಿಸಿಲ್ಲ. ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಪತ್ತೆಯಾಗಿರುವ ಬಾಲಕಿಯರ ವಿವರಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹುಡುಗಿಯನ್ನು ಗುರುತಿಸುವ ಕೆಲಸದಲ್ಲಿ ತೊಡಗಿದ್ದಾರೆ. ಪೊಲೀಸರು ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಲಂಕುಷವಾಗಿ ಪರಿಶೀಲಿಸುತ್ತಿದ್ದಾರೆ.

headless girls dead body was found on the road in meerut up