ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ, 17 ಮಂದಿ ಸಾವು

Horrific road accident in Bengal : ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶನಿವಾರ ರಾತ್ರಿ ವ್ಯಕ್ತಿಯೊಬ್ಬನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಮೆಟಡಾರ್ ವ್ಯಾನ್ ಡಿಕ್ಕಿ ಹೊಡೆದಿದೆ. ವಾಹನದಲ್ಲಿದ್ದ 17 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶನಿವಾರ ರಾತ್ರಿ ವ್ಯಕ್ತಿಯೊಬ್ಬನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಮೆಟಡಾರ್ ವ್ಯಾನ್ ಡಿಕ್ಕಿ ಹೊಡೆದಿದೆ. ವಾಹನದಲ್ಲಿದ್ದ 17 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಪಘಾತದ ವೇಳೆ ವಾಹನದಲ್ಲಿ 20ಕ್ಕೂ ಹೆಚ್ಚು ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದಟ್ಟ ಮಂಜು ಮತ್ತು ವ್ಯಾನ್ ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಅಪಘಾತದಲ್ಲಿ ಹಲವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತದ ನಂತರ ಸ್ಥಳದಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ಉತ್ತರ 24 ಪರಗಣದ ಬಗ್ಡಾದಿಂದ ಅಂತ್ಯಕ್ರಿಯೆಗೆ 20 ಕ್ಕೂ ಹೆಚ್ಚು ಜನರು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಇದೀಗ ಪೊಲೀಸರು ಇಡೀ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

Stay updated with us for all News in Kannada at Facebook | Twitter
Scroll Down To More News Today