HRTC Bus Accident : ಗುಡ್ಡಕ್ಕೆ ಡಿಕ್ಕಿ ಹೊಡೆದ ಬಸ್, ಚಾಲಕ ಸಾವು, 34 ಮಂದಿಗೆ ಗಾಯ

HRTC Bus Accident : ಬಸ್ ನಿಯಂತ್ರಣತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ ಚಾಲಕ ಸಾವನ್ನಪ್ಪಿದ್ದು, 34 ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸೋಮವಾರ ಈ ದುರ್ಘಟನೆ ನಡೆದಿದೆ.

ಶಿಮ್ಲಾ: ಬಸ್ ನಿಯಂತ್ರಣತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ ಚಾಲಕ ಸಾವನ್ನಪ್ಪಿದ್ದು, 34 ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸೋಮವಾರ ಈ ದುರ್ಘಟನೆ ನಡೆದಿದೆ.

ಹಿಮಾಚಲ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ (HRTC) ಬಸ್ ಮನಾಲಿಯಿಂದ ಶಿಮ್ಲಾಕ್ಕೆ ಹೋರಾಡಿತ್ತು. ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿ 3ರಲ್ಲಿನ ಘಾಟ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಗುಡ್ಡಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇದೇ ವೇಳೆ ಬಸ್ ನಲ್ಲಿದ್ದ 34 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ ಎಂದು ಎಸ್ಪಿ ಶಾಲಿನಿ ಅಗ್ನಿಹೋತ್ರಿ ತಿಳಿಸಿದ್ದಾರೆ.

ಪ್ರಯಾಣಿಕರು ತುಂಬಿ ತುಳುಕುತ್ತಿದ್ದರಿಂದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ನ ನಿಯಂತ್ರಣ ತಪ್ಪಿರಬಹುದು ಎನ್ನಲಾಗಿದೆ. ಮತ್ತೊಂದೆಡೆ, ಅಪಘಾತದಿಂದ ಬದುಕುಳಿದ ಕೆಲವು ಪ್ರಯಾಣಿಕರು ಇತರ ವಾಹನಗಳಲ್ಲಿ ತಮ್ಮ ಸ್ಥಳಗಳನ್ನು ತಲುಪಿದರು.

Follow Us on : Google News | Facebook | Twitter | YouTube