ಜಮ್ಮು-ಕಾಶ್ಮೀರ ಟ್ಯಾಕ್ಸಿ ನಿಲ್ದಾಣದಲ್ಲಿ ಸ್ಫೋಟ, ಆರು ಮಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರಾ ಜಿಲ್ಲೆಯ ಸುಂಬಲ್ ಪಟ್ಟಣದ ಸುಮೋ ಟ್ಯಾಕ್ಸಿ ನಿಲ್ದಾಣದಲ್ಲಿ ಮಂಗಳವಾರ ಸ್ಫೋಟ ಸಂಭವಿಸಿದೆ. 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರಾ ಜಿಲ್ಲೆಯ ಸುಂಬಲ್ ಪಟ್ಟಣದ ಸುಮೋ ಟ್ಯಾಕ್ಸಿ ನಿಲ್ದಾಣದಲ್ಲಿ ಮಂಗಳವಾರ ಸ್ಫೋಟ ಸಂಭವಿಸಿದೆ.

ಭಾರತೀಯ ಸೇನೆಯ ಬೆಂಗಾವಲು ಪಡೆ ಮೇಲೆ ಬಾಂಬ್ ದಾಳಿ ನಡೆದಿದೆ. ಸ್ಫೋಟದಲ್ಲಿ ಮಹಿಳೆ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಶ್ರೀನಗರದ ಎಸ್‌ಎಂಎಚ್‌ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಗಳಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.