ರಥೋತ್ಸವ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 11 ಮಂದಿ ಸಜೀವ ದಹನ

ತಮಿಳುನಾಡಿನ ತಂಜಾವೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಾಳಿಮೇಡು ಮೇಲಿನ ದೇವಸ್ಥಾನದ ರಥವೊಂದು ವಿದ್ಯುತ್ ತಂತಿಗೆ ತಗುಲಿ 11 ಮಂದಿ ಸಜೀವ ದಹನವಾಗಿದ್ದಾರೆ. ಇನ್ನೂ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಚೆನ್ನೈ: ತಮಿಳುನಾಡಿನ ತಂಜಾವೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಾಳಿಮೇಡು ಮೇಲಿನ ದೇವಸ್ಥಾನದ ರಥವೊಂದು ವಿದ್ಯುತ್ ತಂತಿಗೆ ತಗುಲಿ 11 ಮಂದಿ ಸಜೀವ ದಹನವಾಗಿದ್ದಾರೆ. ಇನ್ನೂ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗುರುಪೂಜೆ (ಅಯ್ಯಪ್ಪಸ್ವಾಮಿ ಉತ್ಸವ) ಸಂದರ್ಭದಲ್ಲಿ ದೇವರಿಗೆ ರಥೋತ್ಸವವನ್ನು ಆಯೋಜಿಸಲಾಗುತ್ತದೆ. ಈ ಸಂದರ್ಭದಲ್ಲಿ ಭಕ್ತರು ರಥವನ್ನು ಬೀದಿಗಳ ಮೂಲಕ ದೇವಸ್ಥಾನಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ಹೈಟೆನ್ಷನ್ ತಂತಿಗೆ ತಗುಲಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ 11 ಮಂದಿಗೆ ಸಜೀವ ದಾಹವಾಗಿದ್ದಾರೆ. ಅವರಲ್ಲಿ ಇಬ್ಬರು ಅಪ್ರಾಪ್ತರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ರಥೋತ್ಸವ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 11 ಮಂದಿ ಸಜೀವ ದಹನ - Kannada News

11, including children, electrocuted during temple chariot procession in Thanjavur

Follow us On

FaceBook Google News