Crime News

shoots himself, ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಕಾಂಗ್ರೆಸ್ ಶಾಸಕನ ಪುತ್ರ ಆತ್ಮಹತ್ಯೆ

ಜಬಲ್ಪುರ (Suicide of Congress MLA son): ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಸಂಜಯ್ ಯಾದವ್ ಪುತ್ರ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಬಲ್‌ಪುರ ನಗರದಲ್ಲಿ ಈ ಘಟನೆ ನಡೆದಿದೆ. ಶಾಸಕ ಸಂಜಯ್ ಪುತ್ರ ವೈಭವ್ ಯಾದವ್ ಗೆ 17 ವರ್ಷ. ಮನೆಯಲ್ಲಿನ ಬಾತ್ ರೂಂನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಂಡು ಹಾರಿಸಿಕೊಂಡ ತಕ್ಷಣ ಚಿಕಿತ್ಸೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಎಸ್ಪಿ ಸಿದ್ಧಾರ್ಥ ಬಹುಗುಣ ತಿಳಿಸಿದ್ದಾರೆ.

ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಕಾಂಗ್ರೆಸ್ ಶಾಸಕನ ಪುತ್ರ ಆತ್ಮಹತ್ಯೆ - Kannada News

ಶಾಸಕ ಸಂಜಯ್ ಯಾದವ್ ಜಬಲ್‌ಪುರ ಜಿಲ್ಲೆಯ ಬರ್ಗಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಪೊಲೀಸರು ಮನೆಯಲ್ಲಿ ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. ಪತ್ರವನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೈಭವ್ ಯಾದವ್ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪರವಾನಗಿ ಪಡೆದ ಪಿಸ್ತೂಲ್‌ನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವಂತೆ ಮೇಲ್ನೋಟಕ್ಕೆ ಕಂಡು ಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Our Whatsapp Channel is Live Now 👇

Whatsapp Channel

Related Stories

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ