ಕಾಲೇಜಿನಲ್ಲಿ ಯುವತಿ ವಿಚಾರವಾಗಿ ಘರ್ಷಣೆ, ಓರ್ವ ಸಾವು
ಕಾಲೇಜಿನಲ್ಲಿ ಯುವತಿ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಪಂಜಾಬ್‌ನ ಅಮೃತಸರದಲ್ಲಿ ಬುಧವಾರ ಈ ಘಟನೆ ನಡೆದಿದೆ.
ಪೋಲೀಸರ ಪ್ರಕಾರ, ಸ್ಥಳೀಯ ಖಾಲ್ಸಾ ಕಾಲೇಜಿನಲ್ಲಿ ಹುಡುಗಿಯ ವಿಷಯದಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ವಾಗ್ವಾದ ನಡೆಯಿತು. ಇದು ಪ್ರತಿಯಾಗಿ ದೊಡ್ಡ ಘರ್ಷಣೆಗೆ ಕಾರಣವಾಯಿತು. ಈ ಸಂದರ್ಭದಲ್ಲಿ ಒಂದು ಗುಂಪಿನ ವಿದ್ಯಾರ್ಥಿಗಳು ಮತ್ತು ಇನ್ನೊಂದು ಗುಂಪಿನ ವಿದ್ಯಾರ್ಥಿಗಳು ಗುಂಡು ಹಾರಿಸಿದರು. ಗುಂಡಿನ ದಾಳಿಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಬುಲೆಟ್ ಗಾಯಗಳಾಗಿವೆ. ಇವರಲ್ಲಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ.
ಮೃತರನ್ನು ಬಟಾಲಾ ಮೂಲದ ಲವ್‌ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಾಲೇಜು ಆವರಣದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆ ಮಾಡುವುದಾಗಿ ತಿಳಿಸಿದರು.
1 Dead Another Hospitalized With Bullet Injury After Clashes Erupt Outside Amritsar’s Khalsa College