ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, 8 ಮಂದಿ ಸಾವು

ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

Online News Today Team

Lucknow, India (ಲಕ್ನೋ): ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ (Siddharthnagar in Uttar Pradesh) ಭೀಕರ ರಸ್ತೆ ಅಪಘಾತ ಸಂಭವಿಸಿದೆ (A fatal road accident). ಭಾನುವಾರ ಬೆಳಗ್ಗೆ ಸಿದ್ಧಾರ್ಥನಗರದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ (Eight people in the car died on the spot). ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ (Three others were seriously injured).

ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಗೋರಖ್‌ಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Road Accident in Uttar Pradesh Siddharthnagar - Kannada News

ಮದುವೆ ಸಮಾರಂಭಕ್ಕೆ ತೆರುಳುವಾಗ ರಸ್ತೆ ಅಪಘಾತ

ಮದುವೆ ಸಮಾರಂಭಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತದ ವೇಳೆ ಕಾರಿನಲ್ಲಿ 11 ಮಂದಿ ಇದ್ದರು ಎಂದು ತಿಳಿದುಬಂದಿದೆ, ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶ ಭೀಕರ ರಸ್ತೆ ಅಪಘಾತ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ

ಅಪಘಾತದ ಬಗ್ಗೆ ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ.ಗಳನ್ನು ಘೋಷಿಸಲಾಗಿದೆ.

8 Killed After Suv Rams Into Truck In Ups Siddharthnagar

Follow Us on : Google News | Facebook | Twitter | YouTube