ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ.. 8 ಮಂದಿ ಸಾವು
ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪೈಪ್ ತುಂಬಿದ್ದ ಟ್ರಕ್ ಪಲ್ಟಿಯಾಗಿ 8 ಕಾರ್ಮಿಕರು ಸಾವನ್ನಪ್ಪಿದ್ದಾರೆ
Patna, India (ಪಾಟ್ನಾ): ಬಿಹಾರದ (Bihar) ಪುರ್ನಿಯಾ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ (road accident in Bihar). ರಾಷ್ಟ್ರೀಯ ಹೆದ್ದಾರಿ 57ರಲ್ಲಿ ಪೈಪ್ ಲೋಡ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ. ಈ ಘಟನೆಯಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದರು ಮತ್ತು ಕನಿಷ್ಠ ಎಂಟು ಮಂದಿ ಗಾಯಗೊಂಡರು (Eight workers were killed and at least eight were injured).
ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ – ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ
ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಮೃತರೆಲ್ಲರೂ ರಾಜಸ್ಥಾನ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಸಿಲಿಗುರಿಯಿಂದ ಜಮ್ಮುವಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಆದರೆ ಗಾಯಾಳುಗಳ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಲಾರಿ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಚಾಲಕ ನಿದ್ರೆಗೆ ಜಾರಿದ ಕಾರಣ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಲಕನ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.
8 Labourer’s Killed As Pipe Laden Truck Overturns In Bihar
Follow us On
Google News |