ಕುಡಿದ ಅಮಲಿನಲ್ಲಿ 10 ವರ್ಷದ ಬಾಲಕನನ್ನು ಹೊಡೆದು ಕೊಂದ ತಂದೆ
ಕುಪಿತಗೊಂಡ ತಂದೆ ಮದ್ಯದ ಅಮಲಿನಲ್ಲಿ ಮಗನಿಗೆ ಮನಬಂದಂತೆ ಹೊಡೆದಿದ್ದಾನೆ. ಘಟನೆಯಲ್ಲಿ ಗಾಯಗೊಂಡಿದ್ದ ಅವರ ಮಗ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ
ನಾಗ್ಪುರ: ಮಹಾರಾಷ್ಟ್ರದ ಸುರದೇವಿ ಗ್ರಾಮದ ನಿವಾಸಿ ಚಂದ್ಲಾಲ್ ಎಂಬಾತ ತನ್ನ ಮಗನಿಗೆ ಮನೆಗೆ ನೀರು ತರುವಂತೆ ಹೇಳಿದ್ದಾನೆ. ಆದರೆ 10 ವರ್ಷದ ಬಾಲಕ ನಿರಾಕರಿಸಿದ್ದಾನೆ..
ಇದರಿಂದ ಕುಪಿತಗೊಂಡ ತಂದೆ ಮದ್ಯದ ಅಮಲಿನಲ್ಲಿ ಮಗನಿಗೆ ಮನಬಂದಂತೆ ಹೊಡೆದಿದ್ದಾನೆ. ಘಟನೆಯಲ್ಲಿ ಗಾಯಗೊಂಡಿದ್ದ ಅವರ ಮಗ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ. ಇದನ್ನು ನೋಡಿದ ಬಾಲಕನ ಸಂಬಂಧಿಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಬೆಲ್ಟ್ನಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಮರಣೋತ್ತರ ಪರೀಕ್ಷೆ ವರದಿ ತಿಳಿಸಿದೆ.
ಆರೋಪಿಯು ಕುಡಿತದ ಚಟ ಹೊಂದಿದ್ದು, ಕ್ಷುಲ್ಲಕ ವಿಚಾರಕ್ಕೆ ಮಗನ ಮೇಲೆ ಹಲ್ಲೆ ನಡೆಸುವ ಅಭ್ಯಾಸ ಹೊಂದಿದ್ದ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬೆಲ್ಟ್ನಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಮರಣೋತ್ತರ ಪರೀಕ್ಷೆ ವರದಿ ತಿಳಿಸಿದೆ.
ವಿಚಾರಣೆಯ ಸಮಯದಲ್ಲಿ, ಆರೋಪಿ ತಂದೆ ತಪ್ಪೊಪ್ಪಿಕೊಂಡಿದ್ದಾನೆ, ಕೊಲೆ ಪ್ರಕರಣದಲ್ಲಿ ಆತನನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
A father killed a 10-year-old boy
Follow Us on : Google News | Facebook | Twitter | YouTube