Gujarat Accident: ಆಟೋ ರಿಕ್ಷಾ-ಬಸ್ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದು, ಹಲವರಿಗೆ ಗಾಯ

Gujarat Accident: ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ಮಿನಿ ಬಸ್‌ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು, ಓರ್ವ ಪುರುಷ ಮತ್ತು ಮಗು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಮಂಗಳವಾರ ಪೊಲೀಸರು ಈ ಮಾಹಿತಿ ನೀಡಿದ್ದಾರೆ. ಬನಸ್ಕಾಂತದ ಧನೇರಾ ಮತ್ತು ನೆರೆಯ ರಾಜಸ್ಥಾನದ ಪ್ರತಾಪುರವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ವಿಂಚಿವಾಡಿ ಗ್ರಾಮದ ಬಳಿ ಸೋಮವಾರ ಸಂಜೆ ಈ ಅಪಘಾತ ಸಂಭವಿಸಿದೆ ಎಂದು ಧನೇರಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜಸ್ಥಾನದಿಂದ ಬರುತ್ತಿದ್ದ ಮಿನಿ ಬಸ್ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಆಟೋ ರಿಕ್ಷಾದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರಲ್ಲಿ 10 ವರ್ಷದ ಬಾಲಕ ಹಾಗೂ 20ರಿಂದ 50 ವರ್ಷದೊಳಗಿನ ಮೂವರು ಮಹಿಳೆಯರು ಸೇರಿದ್ದಾರೆ.

ಘಟನೆಯಲ್ಲಿ ಇತರ ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇವರಲ್ಲಿ ಇಬ್ಬರು ಪಾಲನ್‌ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

bus collision with auto rickshaw in Gujarat’s Banaskantha district

About Author:

Kannada News Today

Kannada News Today Providing News, information & entertainment in Kannada Language, Since 2019. This Website reacts as a…🔸ಇನ್ನಷ್ಟು ಓದಿ »

Related Stories

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ