ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ.. ನಾಲ್ವರು ಸಾವು

ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ

Fire In Firecracker Factory – ಲಕ್ನೋ: ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸರ್ಸಾವಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋವಿಂದಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ವ್ಯಾಪಿಸಿದ್ದು ಒಂದೇ ಬಾರಿಗೆ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಕಾರ್ಖಾನೆ ಸಂಪೂರ್ಣ ನಾಶವಾಗಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಲವಾರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೃತರ ಪತ್ತೆಗೆ ಪ್ರಯತ್ನ ಮುಂದುವರಿದಿದೆ.

ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸರಸಾವಾ ಪೊಲೀಸ್ ಠಾಣೆ ವ್ಯಾಪ್ತಿಯ ಸೊರನಾ ಅರಣ್ಯದಲ್ಲಿರುವ ಪರವಾನಗಿ ಪಡೆದ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Explosions Due To Fire In Firecracker Factory At Uttar Pradesh

Follow Us on : Google News | Facebook | Twitter | YouTube