Fire Accident, ಇಂದೋರ್: ಕಟ್ಟಡಕ್ಕೆ ಬೆಂಕಿ ತಗುಲಿ ಏಳು ಮಂದಿ ಸಾವು

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. 

Indore, India News (ಇಂದೋರ್): ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಟ್ಟಡವೊಂದರಲ್ಲಿ ಬೆಂಕಿ (Fire on Building) ಕಾಣಿಸಿಕೊಂಡಿದೆ. ಇಂದು ಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಏಳು ಮಂದಿ (7 Kills) ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಇಬ್ಬರು ಮಹಿಳೆಯರು ಸಹ ಸಜೀವವಾಗಿ ಸುಟ್ಟುಹೋಗಿದ್ದಾರೆ. ಅಪಘಾತದಲ್ಲಿ ಸಿಲುಕಿದ್ದ 9 ಮಂದಿಯನ್ನು ರಕ್ಷಿಸಲಾಗಿದೆ. ಅವರಲ್ಲಿ ಐವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಕಟ್ಟಡದ ನೆಲಮಾಳಿಗೆಯಲ್ಲಿರುವ ವಿದ್ಯುತ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿರುವುದಾಗಿ ತಿಳಿದುಬಂದಿದೆ. ಇಂದೋರ್‌ನ ಸ್ವರ್ಣ ಭಾಗ್ ಕಾಲೋನಿಯಲ್ಲಿ ಅಪಘಾತ ಸಂಭವಿಸಿದ ಕಟ್ಟಡ. ಮುಂಜಾನೆ 3.10ಕ್ಕೆ ಅಪಘಾತ ಸಂಭವಿಸಿದೆ.

ಕಟ್ಟಡದಲ್ಲಿದ್ದ ದ್ವಿಚಕ್ರ ವಾಹನಗಳು ಸಹ ಸುಟ್ಟು ಕರಕಲಾಗಿವೆ. ಕಟ್ಟಡದ ಮಾಲೀಕ ಅನ್ಸೀರ್ ಪಟೇಲ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

Fire Accident In Indore Building Kills Seven

Just Now

Mohan Juneja: ಸ್ಯಾಂಡಲ್‌ವುಡ್ ನಟ ಮೋಹನ್ ಜುನೇಜಾ ಇನ್ನಿಲ್ಲ

Follow Us on : Google News | Facebook | Twitter | YouTube