ಗ್ಯಾಸ್ ಸಿಲಿಂಡರ್ ಸ್ಫೋಟ.. ನಾಲ್ವರು ಸಾವು

Story Highlights

ಆಂದ್ರಪ್ರದೇಶದ ಅನಂತಪುರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರ ಸಾವು

ಅಮರಾವತಿ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ದುರಂತ ಘಟನೆ ನಡೆದಿದೆ. ಜಿಲ್ಲೆಯ ಶೆಟ್ಟೂರು ವಲಯದ ಮುಳಕಲೇಡು ಎಂಬಲ್ಲಿ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ.

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಕುಸಿದಿದೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಅವಶೇಷಗಳಡಿಯಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Four Killed In A Gas Cylinder Blast In Andhra Pradesh Anantapur

Related Stories