ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು
ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಪಂಜಾಬ್ನ ತರ್ನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಚಂಡೀಗಢ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಪಂಜಾಬ್ನ ತರ್ನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಒಂದೇ ಕುಟುಂಬದ ಐವರು ಕಪುರ್ತಲಾದಿಂದ ಫತೇಹಾಬಾದ್ಗೆ ಬೈಕ್ನಲ್ಲಿ ಹೊರಟಿದ್ದರು.
ಈ ಸಂದರ್ಭದಲ್ಲಿ ಗುರುದ್ವಾರ ಬಾಬಾ ದಾಂಡಿಯಾವಾಲಾ ಬಳಿ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಮಹಿಳೆ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ ದ್ವಿಚಕ್ರ ವಾಹನ ಕೆಲವು ಅಡಿಗಳಷ್ಟು ಹಾರಿಹೋಯಿತು. ರಸ್ತೆಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ದಂಪತಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಮಹಿಳೆ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಅಪಘಾತ ಮಾಡಿದ ಟ್ರಕ್ ಚಾಲಕ ಪರಾರಿಯಾಗಲು ಯತ್ನಿಸಲಿಲ್ಲ, ಹಾಗೂ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Four Killed In Road Accident At Punjab
Follow Us on : Google News | Facebook | Twitter | YouTube