ಕಾರು-ಟ್ರಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವು

ಕಾರು-ಟ್ರಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹೊರವಲಯದಲ್ಲಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿ ಮತ್ತು ಕಾರು ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರಿಗೆ ತೀವ್ರ ಹಾನಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾರೆ.

ಅಪಘಾತದ ಮಾಹಿತಿ ತಿಳಿದ ನಿಪ್ಪಾಣಿ ಪೊಲೀಸರು ಸ್ಥಳಕ್ಕೆ ಧಾವಿಸಿ ನಾಲ್ವರ ಮೃತದೇಹಗಳನ್ನು ಹೊರತೆಗೆದು ಶವಪರೀಕ್ಷೆಗಾಗಿ ನಿಪ್ಪಾಣಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಒಂದೇ ಕುಟುಂಬದ ಬಾಬು ಪಟೇಲ್ (60), ಅವರ ಪತ್ನಿ ಶಾಯಾ (55), ಸಂಬಂದಿ ಮಹಾತ್ಮ (80) ಮತ್ತು ಮಹೇಶ್ ಪಾಟೀಲ್ (23) ಮೃತಪಟ್ಟವರು. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳುತ್ತಿದ್ದ ಇವರಿಗೆ ಬೆಳಗಾವಿಯಿಂದ ನಿಪ್ಪಾಣಿ ಕಡೆಗೆ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆದಿದೆ. ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಾರು-ಟ್ರಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವು - Kannada News

Four members of the same family were killed in a car-truck collision

Follow us On

FaceBook Google News