ಬೆಂಗಳೂರಿನ ಕೆಂಗೇರಿ ಬಳಿ ಬಸ್ ಅಪಘಾತ, 25 ಕ್ಕೂ ಹೆಚ್ಚು ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ
ಕೆಂಗೇರಿ (Kengeri) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್ಆರ್ಟಿಸಿ ಬಸ್ (KSRTC Bus Accident) ಅಪಘಾತಕ್ಕೀಡಾಗಿದ್ದು, 25 ಮಂದಿ ಗಾಯಗೊಂಡಿದ್ದು, ನಾಲ್ವರು ಸ್ಥಿತಿ ಚಿಂತಾಜನಕವಾಗಿದೆ.
ಬೆಂಗಳೂರು(Bengaluru): ಕೆಂಗೇರಿ (Kengeri) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್ಆರ್ಟಿಸಿ ಬಸ್ (KSRTC Bus Accident) ಅಪಘಾತಕ್ಕೀಡಾಗಿದ್ದು, 25 ಮಂದಿ ಗಾಯಗೊಂಡಿದ್ದು, ನಾಲ್ವರು ಸ್ಥಿತಿ ಚಿಂತಾಜನಕವಾಗಿದೆ.
ಮಡಿಕೇರಿಯಿಂದ ಬೆಂಗಳೂರಿಗೆ (Madikeri To Bangalore) ಕೆಎಸ್ಆರ್ಟಿಸಿ ಬಸ್ನಲ್ಲಿ ಸುಮಾರು 45 ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಈ ಬಸ್ ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ಮಾಹಿತಿ ನೀಡಿದರು.
ಕೆಂಗೇರಿಯ ಭಾರತ್ ಪೆಟ್ರೋಲಿಯಂ (Near Bharat Petroleum) ಬಳಿ ಮಧ್ಯಾಹ್ನ 1.30ರ ಸುಮಾರಿಗೆ ಅಪಘಾತ (Accident) ಸಂಭವಿಸಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ಗೆ ಡಿಕ್ಕಿ ಹೊಡೆದಿದೆ. ಕೆಂಗೇರಿಯ ಭಾರತ್ ಪೆಟ್ರೋಲಿಯಂ ಬಳಿ ಅಪಘಾತ ಸಂಭವಿಸಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ (local hospital) ಗಾಯಾಳುಗಳಿಗೆ ಚಿಕಿತ್ಸೆ ನೀಡಿಸಲಾಗಿತ್ತಿದೆ.
KSRTC Bus Accident Bangalore Near Kengeri
Follow Us on : Google News | Facebook | Twitter | YouTube