ಭೀಕರ ರಸ್ತೆ ಅಪಘಾತ: ಪ್ರವಾಸಿ ಬಸ್‌ಗೆ ಟ್ರಕ್ ಡಿಕ್ಕಿ, ಅಯೋಧ್ಯೆಗೆ ತೆರಳುತ್ತಿದ್ದ ಏಳು ಮಂದಿ ಸಾವು

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಕರ್ನಾಟಕ ಮೂಲದ ಪ್ರವಾಸಿಗರು ಏಳು ಮಂದಿ ಸಾವನ್ನಪ್ಪಿದ್ದಾರೆ.

ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ಭಾನುವಾರ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ (7 Karnataka Tourist Killed). ಅಪಘಾತದಲ್ಲಿ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ಭಾನುವಾರ ಬೆಳಿಗ್ಗೆ ಬಹ್ರೈಚ್-ಲಖಿಂಪುರ ಹೆದ್ದಾರಿಯಲ್ಲಿ ಟ್ರಕ್ ಪ್ರವಾಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಮೋತಿಪುರ್ ಪ್ರದೇಶದ ನಾನಿಹಾ ಮಾರ್ಕೆಟ್‌ನಲ್ಲಿ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಾಗ ಕರ್ನಾಟಕದಿಂದ 16 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಅಪಘಾತಕ್ಕೀಡಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

Seven Killed As Bus On Way To Ayodhya Collides With Truck On Bahraich Lakhimpur Highway

ಭೀಕರ ರಸ್ತೆ ಅಪಘಾತ: ಪ್ರವಾಸಿ ಬಸ್‌ಗೆ ಟ್ರಕ್ ಡಿಕ್ಕಿ, ಅಯೋಧ್ಯೆಗೆ ತೆರಳುತ್ತಿದ್ದ ಏಳು ಮಂದಿ ಸಾವು - Kannada News

ಬಸ್ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಏತನ್ಮಧ್ಯೆ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Ayodhya Bus Accident - 7 Karnataka Tourist Killed

Seven Killed As Bus On Way To Ayodhya Collides With Truck On Bahraich Lakhimpur Highway

Follow us On

FaceBook Google News

Read More News Today