Konaseema Violence: ಅಮಲಾಪುರದಲ್ಲಿ ಪೊಲೀಸ್ ಬಂದೋಬಸ್ತ್, ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ
Konaseema Violence: ಕೋನಸೀಮ ಜಿಲ್ಲೆಗೆ ಮರುನಾಮಕರಣ ವಿರೋಧಿಸಿ ಧರಣಿ ನಿರತ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲೆಯ ಅಮಲಾಪುರಂ ರಣರಂಗವಾಗಿ ಮಾರ್ಪಟ್ಟಿದೆ.
Konaseema Violence: ಕೋನಸೀಮ ಜಿಲ್ಲೆಗೆ ಮರುನಾಮಕರಣ ವಿರೋಧಿಸಿ ಧರಣಿ ನಿರತ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲೆಯ ಅಮಲಾಪುರಂ ರಣರಂಗವಾಗಿ ಮಾರ್ಪಟ್ಟಿದೆ. ಶಾಸಕರ ಮನೆಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದು ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿತು. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಪೊಲೀಸರು ಎಚ್ಚೆತ್ತರು.
ಬೇರೆ ಜಿಲ್ಲೆಗಳಿಂದ ಭಾರೀ ಪ್ರಮಾಣದಲ್ಲಿ ಅಮಲಾಪುರಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾ ಕಾರರನ್ನು ಚದುರಿಸಿದರು. ಸದ್ಯ ಅಮಲಾಪುರಂನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಏಲೂರು ರೇಂಜ್ ಡಿಐಜಿ ಪಾಲರಾಜು ಅಲ್ಲೇ ಉಳಿದುಕೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.
ಎರಡು ಕೋಮುಗಳ ನಡುವೆ ಘರ್ಷಣೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಅಮಲಾಪುರದಲ್ಲಿ ಯಾರಿಗೂ ಹೊರಗೆ ಬರಲು ಅವಕಾಶವಿಲ್ಲ. ಸೆಕ್ಷನ್ 144 ಜಾರಿಗೊಳಿಸಲಾಗುತ್ತಿದೆ.
ಇದೇ ವೇಳೆ ಅಮಲಾಪುರಂನಲ್ಲಿ ಉಂಟಾಗಿರುವ ಉದ್ವಿಗ್ನತೆಯನ್ನು ನಿಯಂತ್ರಣಕ್ಕೆ ತರಲು ಅಧಿಕಾರಿಗಳು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಗಡಿಯುದ್ದಕ್ಕೂ ಕರ್ಫ್ಯೂ ಜಾರಿಗೊಳಿಸಲು ಜಿಲ್ಲಾಧಿಕಾರಿ ನಿರ್ಧರಿಸಿದ್ದಾರೆ.
ಮುಂಜಾಗ್ರತಾ ಕ್ರಮಗಳ ಭಾಗವಾಗಿ ಬುಧವಾರದಿಂದಲೇ ಕರ್ಫ್ಯೂ ಜಾರಿಯಾಗಲಿದೆ ಎಂದು ಘೋಷಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಲಭೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಪೊಲೀಸರು ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ವಿಡಿಯೋ ದೃಶ್ಯಾವಳಿ ಆಧರಿಸಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಜಿಲ್ಲೆಯಾದ್ಯಂತ ಜನಪ್ರತಿನಿಧಿಗಳ ಕಚೇರಿ ಹಾಗೂ ಮನೆಗಳಿಗೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಏರ್ಟೆಲ್ ತನ್ನ ಸೇವೆಗಳನ್ನು ಸ್ಥಗಿತಗೊಳಿಸಿದೆ. ಕೋನಸೀಮೆಯಲ್ಲಿ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.
The Situation In Konaseema Is Under Control
Follow Us on : Google News | Facebook | Twitter | YouTube