ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

Aurangabad, Maharashtra (ಔರಂಗಾಬಾದ್, ಮಹಾರಾಷ್ಟ್ರ): ಜಿಲ್ಲೆಯ ಗಂಗಾಪುರ ತಾಲೂಕಿನ ಪಚ್ಪಿರವಾಡಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಮವಾರ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತ ಬಾಲಕರನ್ನು ಸ್ವಪ್ನಿಲ್ ಸಂತೋಷ್ ಕಾಳೆ (13) ಮತ್ತು ಅವರ ಕಿರಿಯ ಸಹೋದರ ಶೋಹಿಲ್ (11) ಎಂದು ಗುರುತಿಸಲಾಗಿದೆ, ಅವರು ಔರಂಗಾಬಾದ್ ನಗರದ ಗಾರ್ಖೇಡ ಪ್ರದೇಶದವರು, ಬೇಸಿಗೆ ರಜೆಯನ್ನು ಆನಂದಿಸಲು ಚಿಕ್ಕಮ್ಮನ ಮನೆಗೆ ಬಂದಿದ್ದರು.

ನೆನ್ನೆ ಮಧ್ಯಾಹ್ನ ಈ ಸಹೋದರರು ತಮ್ಮ ಸೋದರಸಂಬಂಧಿಯೊಂದಿಗೆ ಈಜಲು ಕೃಷಿ ಹೊಂಡಕ್ಕೆ ಹೋಗಿದ್ದರು, ಅಲ್ಲಿ ಅವರು ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯನ್ನು ಕಂಡು ಈಜು ಬಲ್ಲ ಅವರ ಸೋದರ ಸಂಬಂಧಿ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ, ನಂತರ ಸ್ಥಳೀಯ ಪೊಲೀಸರು ಗ್ರಾಮಸ್ಥರ ನೆರವಿನಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಈ ಸಂಬಂಧ ಸಿಲ್ಲೆಗಾಂವ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

Two brothers drown in farm pond in Aurangabad

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ