ದೆಹಲಿಯಲ್ಲಿ ಕಾರಿನ ಮೇಲೆ ಗುಂಡಿನ ದಾಳಿ
ಪಶ್ಚಿಮ ದೆಹಲಿಯ ಸುಭಾಷ್ ನಗರದಲ್ಲಿ, ಜನನಿಬಿಡ ಪ್ರದೇಶದಲ್ಲಿಯೇ ರಸ್ತೆಯೊಂದರಲ್ಲಿ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಪಶ್ಚಿಮ ದೆಹಲಿಯ ಸುಭಾಷ್ ನಗರದಲ್ಲಿ, ಜನನಿಬಿಡ ಪ್ರದೇಶದಲ್ಲಿಯೇ ರಸ್ತೆಯೊಂದರಲ್ಲಿ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ ಶಾಂತಿನಗರದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಇದೇ ವೇಳೆ ಅಪರಿಚಿತ ವ್ಯಕ್ತಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ನಂತರ ಆ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಗೊಂಡವರನ್ನು ಅಜಯ್ ಚೌಧರಿ ಮತ್ತು ಜಸ್ಸಾ ಚೌಧರಿ ಎಂದು ಗುರುತಿಸಲಾಗಿದೆ. ಒಟ್ಟು ಹತ್ತು ಸುತ್ತಿನ ಗುಂಡಿನ ದಾಳಿ ನಡೆದಿದೆ.
ಗುಂಡಿನ ದಾಳಿಗೆ ಕಾರಣರಾದವರನ್ನು ಗುರುತಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಡಿಸಿಪಿ ಘನಶ್ಯಾಮ್ ಬನ್ಸಾಲ್ ಹೇಳಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆ ಪ್ರದೇಶದಲ್ಲಿ ಶೋಧ ನಡೆಸಲಾಗಿದೆ ಎಂದು ತಿಳಿದುಬಂದಿದೆ.
Unidentified Suspects Open Fire At A Car In Delhi
Delhi | More than 10 rounds of firing reported in the Subhash Nagar area of West Delhi. Police & top officials deployed at the spot. More details awaited: Delhi Police
— ANI (@ANI) May 7, 2022
Follow Us on : Google News | Facebook | Twitter | YouTube