Bus Accident: ಖಾಸಗಿ ಬಸ್ ಪಲ್ಟಿ; 4 ವಿದ್ಯಾರ್ಥಿಗಳು ಸೇರಿದಂತೆ 8 ಸಾವು…!

ಬೆಂಗಳೂರು : ತುಮಕೂರು ಜಿಲ್ಲೆಯ ಪಾವಗಡ ಮತ್ತು ವೈ ಎಸ್ ಹೊಸಕೋಟಾ ನಡುವೆ ಖಾಸಗಿ ಬಸ್ ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಬಸ್‌ನಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ 80 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಲ್ಲದೇ ಬಸ್ ನಲ್ಲಿ ಜನಸಂದಣಿ ಇದ್ದ ಕಾರಣ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಸ್ ನ ಮೇಲ್ಭಾಗದಲ್ಲಿ ಕುಳಿತು ಪ್ರಯಾಣಿಸಿದರು ಎನ್ನಲಾಗಿದೆ.

ಪಾವಗಡ ತಾಲೂಕಿನ ಪಳವಳ್ಳಿ ಟೌನ್ ಬಳಿ ಕೆರೆ ಏರಿ ಮೇಲೆ ಹೋಗುತ್ತಿದ್ದ ವೇಳೆ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾರ್ವಜನಿಕರ ನೆರವಿನಿಂದ ಗಾಯಾಳುಗಳನ್ನು ರಕ್ಷಿಸಿ ಸಮೀಪದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ವಿಷಯ ತಿಳಿದ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

Related Stories

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ