ಅಕ್ರಮ ಸಂಬಂಧ ಶಂಕಿಸಿ ಪತ್ನಿ ಮೇಲೆ ಆಸಿಡ್ ಎರಚಿದ ವ್ಯಕ್ತಿ ಬಂಧನ
ಪತ್ನಿ ಮೇಲೆ ಅನುಮಾನದಿಂದ ಆಸಿಡ್ ದಾಳಿ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ
ಚೆನ್ನೈ: ಬೇರೊಬ್ಬನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಪತ್ನಿಯ ಮೇಲೆ ಆಸಿಡ್ ಎರಚಿದ ವ್ಯಕ್ತಿಯನ್ನು ಪೊಲೀಸರು ಬುಧವಾರ ತಮಿಳುನಾಡಿನ ವೆಲ್ಲೂರಿನಲ್ಲಿ ಬಂಧಿಸಿದ್ದಾರೆ. ವೆಲ್ಲೂರು ಸಮೀಪದ ಕೊಂಡಟೂರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಆರೋಪಿಯನ್ನು 59 ವರ್ಷದ ವೇಲು ಎಂದು ಗುರುತಿಸಲಾಗಿದೆ. ವೇಲು 12 ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರಿಗೆ ಹತ್ತು ಮತ್ತು ಏಳು ವರ್ಷದ ಇಬ್ಬರು ಮಕ್ಕಳಿದ್ದಾರೆ.
ವಾರದ ಹಿಂದೆ ಪತ್ನಿ ಬೇರೊಬ್ಬ ಪುರುಷನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಪತ್ನಿಯೊಂದಿಗೆ ಜಗಳವಾಡಿದ್ದ. ಈ ನಡುವೆ ಬುಧವಾರ ಪತ್ನಿಯ ಬೆರಳಿಗೆ ಆಸಿಡ್ ಎರಚಿದ್ದಾನೆ. ಸುಟ್ಟ ಗಾಯಗಳಿಂದ ಸಂತ್ರಸ್ತೆ ಕೂಗಿಕೊಂಡಿದ್ದು, ಸ್ಥಳೀಯರು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಆತನನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.
Man Arrested For Throwing Acid On Wife After Suspecting Illicit Affair
Follow us On
Google News |