ಮಧ್ಯಪ್ರದೇಶದಲ್ಲಿ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ ವ್ಯಕ್ತಿಯ ಮೇಲೆ ಹಲ್ಲೆ!
ಮೋಟಾರ್‌ಸೈಕಲ್‌ನಲ್ಲಿ ಹೋಗುತ್ತಿದ್ದಾಗ ಆತನ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ.
ಭೋಪಾಲ್: ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಸಂಚಲನ ಮೂಡಿಸಿದೆ. ನಿನ್ನೆ ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಆಯುಷ್ ಜಾದಮ್ (25) ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ, ಈ ಬಗ್ಗೆ ಪೊಲೀಸರು 13 ಜನರ ವಿರುದ್ಧ ಪ್ರಕರಣ ದಾಖಲಿಸಿ 2 ಜನರನ್ನು ಬಂಧಿಸಿದ್ದಾರೆ.
ಸಂತ್ರಸ್ತ ಬೆಳಿಗ್ಗೆ ತನ್ನ ಮೋಟಾರ್‌ಸೈಕಲ್‌ನಲ್ಲಿ ಸ್ಥಳೀಯ ಟೋಲ್ ಬೂತ್ ಮೂಲಕ ಹಾದು ಹೋಗುತ್ತಿದ್ದಾಗ ಕೆಲವರು ಹಲ್ಲೆ ನಡೆಸಿದ್ದಾರೆ. ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದಾಗ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಏತನ್ಮಧ್ಯೆ, ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕೆಲವು ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಎಸ್ಪಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರು.
man attacked in madhya pradesh for supporting nupur sharma
Follow us On
Google News |
Advertisement