Man Falls from 19th Floor: ಜೀವ ಉಳಿಸಿಕೊಳ್ಳಲು ಹೋಗಿ ವ್ಯಕ್ತಿ ಸಾವು .. ವಿಡಿಯೋ

Man Falls from 19th Floor: ಶುಕ್ರವಾರ ಮಧ್ಯಾಹ್ನ ಮುಂಬೈನ ಅವಿಘ್ನ ಪಾರ್ಕ್ ನಲ್ಲಿ 61 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. 19 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 30 ವರ್ಷದ ಅರುಣ್ ತಿವಾರಿ ಜೀವ ಉಳಿಸಿಕೊಳ್ಳಲು ಯತ್ನಿಸಿದ್ದಾರೆ.

ಮುಂಬೈ (Man Falls from 19th Floor):  ಶುಕ್ರವಾರ ಮಧ್ಯಾಹ್ನ ಮುಂಬೈನ ಅವಿಘ್ನ ಪಾರ್ಕ್ ನಲ್ಲಿ 61 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. 19 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 30 ವರ್ಷದ ಅರುಣ್ ತಿವಾರಿ ಜೀವ ಉಳಿಸಿಕೊಳ್ಳಲು ಯತ್ನಿಸಿದ್ದಾರೆ.

ಈ ಪ್ರಕ್ರಿಯೆಯಲ್ಲಿ, ತಿವಾರಿ ಮಹಡಿಯಲ್ಲಿರುವ ಬಾಲ್ಕನಿಯಿಂದ ಗೋಡೆ ಹಿಡಿದು ಕೆಳಗೆ ಇಳಿಯಲು ಮುಂದಾಗಿದ್ದಾರೆ, ಆದರೆ ಬ್ಯಾಲನ್ಸ್ ತಪ್ಪಿ ಕೆಳಬಿದ್ದಿದ್ದಾರೆ, ಕೆಳಗೆ ಬಿದ್ದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಬಿಎಂಸಿ ವಿಪತ್ತು ನಿಯಂತ್ರಣ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಮುಂಬೈನ ಅವಿಘ್ನ ಪಾರ್ಕ್‌ನಲ್ಲಿ 61 ಅಂತಸ್ತಿನ ಕಟ್ಟಡದಲ್ಲಿ ಬೆಳಿಗ್ಗೆ 11:55 ಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಬಿಎಂಸಿ ಆಯುಕ್ತ ಇಕ್ಬಾಲ್ ಚಾಹೀಲ್ ತಿಳಿಸಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ 19 ನೇ ಮಹಡಿಯಲ್ಲಿನ ಬೆಂಕಿಯನ್ನು ನಿಯಂತ್ರಿಸಿದ್ದಾರೆ ಎಂದು ಅವರು ಹೇಳಿದರು. ಆ ಮಹಡಿಯಲ್ಲಿದ್ದವರೆಲ್ಲ ಜೀವಂತವಾಗಿದ್ದಾರೆ ಎಂದು ಹೇಳಿದರು. ಬೆಂಕಿಯ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಬಿಎಂಸಿ ಆಯುಕ್ತರು ತಿಳಿಸಿದ್ದಾರೆ. ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.