ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

4 ವರ್ಷದ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ನಡೆಸಿದ ಘಟನೆ ಮಧ್ಯಪ್ರದೇಶ ರಾಜ್ಯದಲ್ಲಿ ನಡೆದಿದೆ. ನಾಲ್ಕು ವರ್ಷದ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

4 ವರ್ಷದ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ನಡೆಸಿದ ಘಟನೆ ಮಧ್ಯಪ್ರದೇಶ ರಾಜ್ಯದಲ್ಲಿ ನಡೆದಿದೆ. ನಾಲ್ಕು ವರ್ಷದ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ರೇವಾ ಜಿಲ್ಲೆಯಲ್ಲಿ ಭಾನುವಾರ ಸಂಜೆ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದ ಮಗುವಿನ ಮೇಲೆ 22 ವರ್ಷದ ಯುವಕ ಚಾಕೊಲೇಟ್ ಆಸೆ ತೋರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ದಿಲೀಪ್ ದಹಿಯಾ ತಿಳಿಸಿದ್ದಾರೆ. ಆರೋಪಿಯ ಮನೆಯಿಂದ ಹೊರ ಬಂದ ಮಗು ಅಳುತ್ತಾ ಪೋಷಕರಿಗೆ ನಡೆದ ಘಟನೆಯನ್ನು ಹೇಳಿದ್ದು, ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ದಿಲೀಪ್ ದಹಿಯಾ ತಿಳಿಸಿದ್ದಾರೆ. ಮಗುವನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದು, ಬಾಲಕಿ ಆರೋಗ್ಯವಾಗಿದ್ದಾಳೆ.

Stay updated with us for all News in Kannada at Facebook | Twitter
Scroll Down To More News Today