12 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
(ಬಾಲಕಿ ಮೇಲೆ ಅತ್ಯಾಚಾರ) ಗ್ರಾಮದ ಜನರ ಪರವಾಗಿ ನಿಲ್ಲಬೇಕಾದ ಸ್ವಯಂಸೇವಕರೇ.. ರಾಕ್ಷಸರಾಗಿದ್ದಾರೆ. 12 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಶ್ರೀಕಾಕುಳಂ: (ಬಾಲಕಿ ಮೇಲೆ ಅತ್ಯಾಚಾರ) ಗ್ರಾಮದ ಜನರ ಪರವಾಗಿ ನಿಲ್ಲಬೇಕಾದ ಸ್ವಯಂಸೇವಕರೇ.. ರಾಕ್ಷಸರಾಗಿದ್ದಾರೆ. 12 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಆಂಧ್ರಪ್ರದೇಶ ರಾಜ್ಯದ ದೂರದ ಹಳ್ಳಿಯೊಂದರಲ್ಲಿ ನಡೆದಿರುವ ಈ ದುಷ್ಕೃತ್ಯ ಇತ್ತೀಚೆಗೆ ಬೆಳಕಿಗೆ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಷ್ಟೇ ಕಾನೂನುಗಳನ್ನು ಜಾರಿಗೆ ತಂದರೂ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.
ಶ್ರೀಕಾಕುಳಂ ಜಿಲ್ಲೆಯ ವೀರಘಟ್ಟಂ ಮಂಡಲ ನುಡುಕೂರು ಎಂಬಲ್ಲಿ ಬೋತ್ಸಾ ಹರಿಪ್ರಸಾದ್ ಮತ್ತು ಗುಗ್ಗಿಲಾಪು ರಾಂಬಾಬು ಅವರು ಗ್ರಾಮ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರೊಂದಿಗೆ ಜೋಡಿಯಾಗಿದ್ದ ಇನ್ನೊಬ್ಬ ವ್ಯಕ್ತಿ, ಹತ್ತಿರದ ಮನೆಯಲ್ಲಿ ಒಬ್ಬಂಟಿಯಾಗಿರುವ 12 ವರ್ಷದ ಬಾಲಕಿಯನ್ನು ನೋಡಿದ್ದಾನೆ.
ಅಂಗಳದಲ್ಲಿ ತಂದೆ-ತಾಯಿ ಇಲ್ಲದಿರುವುದನ್ನು ತಿಳಿದು ಆಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಲೈಂಗಿಕ ಕಿರುಕುಳ ನೀಡಿ ಅಲ್ಲಿಂದ ಪರಾರಿಯಾಗಿದ್ದಾರೆ.
ಕುಟುಂಬಸ್ಥರು ಆಗಮಿಸಿ ಅಸ್ವಸ್ಥಗೊಂಡ ಬಾಲಕಿಯನ್ನು ವಿಚಾರಿಸಿದಾಗ, ಅಸಲಿ ವಿಷಯ ಬೆಳಕಿಗೆ ಬಂದಿದೆ. ತಡವಾಗಿ ಬೆಳಕಿಗೆ ಬಂದಿರುವ ಘಟನೆಗೆ ಸಂಬಂಧಿಸಿದಂತೆ ಬಾಲಕಿ ಹಾಗೂ ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪೊಲೀಸರು ಸ್ವಯಂಸೇವಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಸ್ಥರು ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
Follow us On
Google News |