ಬಿಹಾರದಲ್ಲಿ ನಿರ್ಭಯ ತರಹದ ಘಟನೆ.. ಬಸ್ಸಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಬಿಹಾರ: 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯ ತರಹದ ಘಟನೆಯೊಂದು ಬಿಹಾರದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿದೆ. ಕೆಲವು ಕಾಮುಕರು ಬಸ್ಸಿನಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೇಟಿಯಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಅಪ್ರಾಪ್ತ ಬಾಲಕಿಯೊಬ್ಬಳು ಬಸ್‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಗೆ ಪ್ರಥಮ ಚಿಕಿತ್ಸೆ ನೀಡಿ ವಿಚಾರಿಸಲಾಗಿ ಬಸ್ ಚಾಲಕ ಮತ್ತು ತನ್ನ ಇಬ್ಬರು ಗೆಳೆಯರೊಂದಿಗೆ ಕೂಲ್ ಡ್ರಿಂಕ್ಸ್ ನಲ್ಲಿ ಡ್ರಗ್ಸ್ ಬೆರೆಸಿದ್ದಾರೆ ಎಂದು ತಿಳಿಸಿದ್ದಾಳೆ.
ಕೂಲ್ ಡ್ರಿಂಕ್ಸ್ ಕುಡಿದು ಪ್ರಜ್ಞೆ ತಪ್ಪಿದ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಎಂದು ಅಪ್ರಾಪ್ತ ಬಾಲಕಿ ಹೇಳಿದ್ದಾಳೆ. ಮೂವರು ವ್ಯಕ್ತಿಗಳು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಶಂಕಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಚಾಲಕ ಮತ್ತು ಸಹಾಯಕನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಉಳಿದವರಿಗಾಗಿ ಬಲೇ ಬಿಸಿರುವುದಾಗಿ ಎಂದು ವಿವರಿಸಿದರು. ಬಸ್ ವಶಪಡಿಸಿಕೊಳ್ಳಲಾಗಿದೆ ಎಂದರು. ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
Minor Girl Raped In Bus In Bihar 2 Held



