MLA’s Wife Found Dead : ನೇಣು ಬಿಗಿದ ಸ್ಥಿತಿಯಲ್ಲಿ ಶಾಸಕರ ಪತ್ನಿ ಶವ ಪತ್ತೆ
ಮುಂಬೈ : ಮಹಾರಾಷ್ಟ್ರದ ವಸೇನಾ ಶಾಸಕ ಮಂಗೇಶ್ ಕುಡಾಲ್ಕರ್ ಅವರ ಪತ್ನಿ ರಜನಿ ಕುಡಾಲ್ಕರ್ ಅವರ ಶವ ಭಾನುವಾರ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮುಂಬೈ ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದರು. ಪೊಲೀಸರು ಆತ್ಮಹತ್ಯೆ ಎಂದು ಶಂಕಿಸಿದ್ದಾರೆ.
The body of Shiv Sena MLA Mangesh Kudalkar's wife Rajani was found hanging at her residence. Senior police officials present at the spot: Mumbai Police
— ANI (@ANI) April 17, 2022
ಮಂಗೇಶ್ ಕುಡಾಲ್ಕರ್ ಪ್ರಸ್ತುತ ಕುರ್ಲಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕುರ್ಲಾ ಪೂರ್ವದ ನೆಹರು ನಗರ ಪ್ರದೇಶದ ಡಿಗ್ನಿಟಿ ಕೋಆಪರೇಟಿವ್ ಹೌಸಿಂಗ್ ಸೊಸೈಟಿಯಲ್ಲಿ ರಾತ್ರಿ 8:30 ರ ಸುಮಾರಿಗೆ ಅವರ ಪತ್ನಿ ರಜನಿ ಕುಡಾಲ್ಕರ್ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಮಾಹಿತಿ ಸಿಕ್ಕ ತಕ್ಷಣ. ಪೊಲೀಸರು ಸ್ಥಳಕ್ಕಾಗಮಿಸಿ ರಜನಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಘಾಟ್‌ಕೋಪರ್‌ನ ರಾಜವಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನೆಹರು ನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಅಪಘಾತ ಮರಣ ವರದಿಯನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
MLA’s Wife Found Dead