House Collapse, ಗೋಡೆ ಕುಸಿದು ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ

Story Highlights

Nine dead, nine others injured in house collapse Tamil Nadu : ಗೋಡೆ ಕುಸಿದು ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಶುಕ್ರವಾರ ಈ ದಾರುಣ ಘಟನೆ ನಡೆದಿದೆ. 

  • ಮನೆ ಕುಸಿದು ಒಂಬತ್ತು ಸಾವು, ಒಂಬತ್ತು ಮಂದಿಗೆ ಗಾಯ
  • ಗಾಯಾಳುಗಳು ಗುಡಿಯಾತಂ ಸರ್ಕಾರಿ ಆಸ್ಪತ್ರೆ ಮತ್ತು ಅಡುಕ್ಕಂಪರೈನ ಸರ್ಕಾರಿ ವೆಲ್ಲೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚೆನ್ನೈ (Chennai, Tamil Nadu): ಗೋಡೆ ಕುಸಿದು ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ (Nine dead in house collapse). ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಶುಕ್ರವಾರ ಈ ದಾರುಣ ಘಟನೆ ನಡೆದಿದೆ. ತಮಿಳುನಾಡಿನಲ್ಲಿ ಭಾರೀ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಪೆರ್ನಂಪಟ್ಟು ಪ್ರದೇಶದಲ್ಲಿ ಮನೆಯೊಂದರ ಗೋಡೆ ಕುಸಿದಿದೆ.

ಘಟನೆಯಲ್ಲಿ ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಹಾರ ಕ್ರಮ ಕೈಗೊಂಡಿದ್ದಾರೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ.

ಗೋಡೆ ಕುಸಿದು ಬಿದ್ದ ಜಾಗದಲ್ಲಿ 50ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಘಟನೆ ಬಗ್ಗೆ ಸಿಎಂ ಸ್ಟಾಲಿನ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಗಾಯಗೊಂಡವರಿಗೆ 50,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಪ್ರಕಟಿಸಲಾಗಿದೆ.

ಗಾಯಾಳುಗಳು ಗುಡಿಯಾತಂ ಸರ್ಕಾರಿ ಆಸ್ಪತ್ರೆ ಮತ್ತು ಅಡುಕ್ಕಂಪರೈನ ಸರ್ಕಾರಿ ವೆಲ್ಲೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಮಿಳುನಾಡು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ (ಟಿಎನ್‌ಎಫ್‌ಆರ್‌ಎಸ್) ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಅವರು ಒಂಬತ್ತು ಸದಸ್ಯರನ್ನು ಅವಶೇಷಗಳಿಂದ ರಕ್ಷಿಸಿದ್ದಾರೆ ಮತ್ತು ಹುಡುಕಾಟ ನಡೆಯುತ್ತಿದೆ ಎಂದು ಆರ್ಡಿಒ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಪಿ.ಕುಮಾರವೇಲ್ ಪಾಂಡಿಯನ್ ಆಸ್ಪತ್ರೆಯಲ್ಲಿ ಪರಿಸ್ಥಿತಿ ಅವಲೋಕಿಸಿ ವಿಚಾರಿಸಿದರು.

Nine dead, nine others injured in house collapse at Vellore Tamil Nadu

Related Stories