ಯುಪಿಯಲ್ಲಿ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ನವದೆಹಲಿ: ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ 13 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕತ್ತು ಹಿಸುಕಿ (ಗಂಟಲು ಸೀಳಿ ಕೊಲೆ) ಹತ್ಯೆ ಮಾಡಲಾಗಿದೆ. ಬುಧವಾರ ರಾತ್ರಿ ಮನೆಯ ಹೊರಗೆ ಮಲಗಿದ್ದ ಬಾಲಕಿಯನ್ನು ಆರೋಪಿಗಳು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಗುರುವಾರ ಬಾಲಕಿಯ ಮೃತದೇಹ ಸಮೀಪದ ಹೊಲದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವದ ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
One More Dalit Girl Gang Raped In Uttar Pradesh