ಅರುಣಾಚಲ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ.. 30ಕ್ಕೂ ಹೆಚ್ಚು ಮನೆ, ಅಂಗಡಿಗಳಿಗೆ ಬೆಂಕಿ.. ವಿಡಿಯೋ
ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಇಟಾನಗರ: ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ 30ಕ್ಕೂ ಹೆಚ್ಚು ಮನೆ, ಅಂಗಡಿಗಳು ಸುಟ್ಟು ಕರಕಲಾಗಿವೆ.
ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಸುಮಾರು 4 ಗಂಟೆಗಳ ಕಾಲ ಶ್ರಮಿಸಿ ಬೆಂಕಿ ನಂದಿಸಿದರು. ಸಂಜೆ 6 ಗಂಟೆ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಅಪ್ಪರ್ ಸಿಯಾಂಗ್ ಉಪ ಎಸ್ಪಿ ಒಪಿರ್ ಪರನ್ ತಿಳಿಸಿದ್ದಾರೆ.
ಈ ಅಪಘಾತದಿಂದ ಸುಮಾರು ರೂ. 5 ಕೋಟಿ ಆಸ್ತಿ ಹಾನಿಯಾಗಿದೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Over 30 Houses Shops Gutted In Arunachal Pradesh
#WATCH | Troops of Spear Corps, Arunachal Scouts and Border Roads Task Force (BRTF) assisted civil administration to save locals from a raging fire in Yingkiong in Upper Siang district of Arunachal Pradesh, yesterday, April 21.
(Video source: Army) pic.twitter.com/Xh1d86Wov4
— ANI (@ANI) April 21, 2022
Follow Us on : Google News | Facebook | Twitter | YouTube