ಮಹಿಳಾ ಟೆಕ್ಕಿ ಅನುಮಾನಾಸ್ಪದ ಸಾವು.. ಪೊಲೀಸ್ ಪೇದೆ ಬಂಧನ
ನೋಯ್ಡಾದಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದ 26 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಕಾನ್‌ಸ್ಟೆಬಲ್ ಮತ್ತು ಟೆಕ್ಕಿಯನ್ನು ಬಂಧಿಸಲಾಗಿದೆ
ನೋಯ್ಡಾ: ನೋಯ್ಡಾದಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದ 26 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಕಾನ್‌ಸ್ಟೆಬಲ್ ಮತ್ತು ಟೆಕ್ಕಿಯನ್ನು ಬಂಧಿಸಲಾಗಿದೆ. ಆಗಸ್ಟ್ 2 ರಂದು ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಹೇಟಲ್‌ನಲ್ಲಿ ಸಾವನ್ನಪ್ಪಿದ್ದರು.
ನೋಯ್ಡಾ ಸೆಕ್ಟರ್ 49 ಪೊಲೀಸ್ ಠಾಣೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪೇದೆಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಮಹಿಳೆಯೊಂದಿಗೆ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಯನ್ನು ಕೂಡ ಬಂಧಿಸಲಾಗಿದೆ.
ಮಹಿಳೆಯ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಐಪಿಸಿ 376, 302 ಅಡಿಯಲ್ಲಿ ತನಿಖೆ ಆರಂಭಿಸಲಾಗಿದೆ. ಇಬ್ಬರು ಮೃತ ಮಹಿಳೆಯ ಸ್ನೇಹಿತರಾಗಿದ್ದು, ಟೆಕಿಯ ಸಾವಿನ ನಂತರ ಇದು ತಿಳಿದುಬಂದಿದೆ.
ಬಂಧಿತ ಪೇದೆಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಅತ್ಯಾಚಾರ ನಡೆದಿರುವುದು ಬಹಿರಂಗವಾಗಿಲ್ಲ. ಆದರೆ ಆಕೆ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ.
police constable and a techie arrested in woman death at noida
Follow us On
Google News |
Advertisement