ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಪ್ರಿನ್ಸಿಪಾಲ್ ಬಂಧನ

ರಾಂಚಿ: ಶಾಲಾ ಹಾಸ್ಟೆಲ್‌ಗಳಲ್ಲಿ ಇರುವ ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಪ್ರಿನ್ಸಿಪಾಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಪ್ರಾಂಶುಪಾಲರನ್ನು ಬಂಧಿಸಿದ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.
ಜಾರ್ಖಂಡ್‌ನ ಚೈಬಾಸಾ ಪೊಲೀಸ್ ಠಾಣೆ ವ್ಯಾಪ್ತಿಯ ಯಾವುದೇ ಖಾಸಗಿ ಶಾಲೆಯ ಪ್ರಾಂಶುಪಾಲರು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಏಳು ಅಪ್ರಾಪ್ತ ವಿದ್ಯಾರ್ಥಿಗಳು ದೂರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರೆಲ್ಲರೂ ಶಾಲೆಯ ಹಾಸ್ಟೆಲ್‌ನಲ್ಲಿ ಇರುವುದಾಗಿ ತಿಳಿದು ಬಂದಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
Principal Arrested For Molesting Schoolgirls In Jharkhand



