Car Accident : ನಿಯಂತ್ರಣ ತಪ್ಪಿ ಕಾರು ಪಲ್ಟಿ, ಐವರು ಸಾವು

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಪಲ್ಟಿಯಾಗಿ ಮೂವರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. 

🌐 Kannada News :

ಜೈಪುರ: ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಪಲ್ಟಿಯಾಗಿ ಮೂವರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.

ಪೊಲೀಸರ ಪ್ರಕಾರ, ರಾಮಗಢ ಪ್ರದೇಶದಲ್ಲಿ ತನೋಟ್ ಮಾತಾ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಈಗ ಶವಾಗಾರದಲ್ಲಿ ಸಂರಕ್ಷಿಸಲಾಗಿದೆ. ವೇಗವಾಗಿ ಬಂದ ಕಾರು ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿದೆ. ಅಲ್ಲಿದ್ದ ಹಲವರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ.

ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರನ್ನು ರಾಮಗಢ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಮೃತರೆಲ್ಲರೂ ಗಂಗಾನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಅಪಘಾತದ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎತ್ತರದಿಂದ ಕಂದಕಕ್ಕೆ ಬಿದ್ದಿದ್ದರಿಂದ ಕಾರು ನಜ್ಜುಗುಜ್ಜಾಗಿದೆ.

ವಾಹನದಿಂದ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಮೃತರೆಲ್ಲರೂ 24 ರಿಂದ 32 ವರ್ಷದೊಳಗಿನವರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

➟ ☞ Kannada News Today ಸುದ್ದಿಗಾಗಿ FacebookTwitter ಅನುಸರಿಸಿ. Google News | News App ಡೌನ್ಲೋಡ್ ಮಾಡಿಕೊಳ್ಳಿ.
Scroll Down To More News Today