ಪತ್ನಿ-ಮಗುವಿನೊಂದಿಗೆ ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ

ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ,  ಪಡುಪಣಂಬೂರು ಪ್ರದೇಶದ ಕಲ್ಲಾಪು ರೈಲ್ವೆ ಗೇಟ್ ಬಳಿ ಬಾಡಿಗೆ ಮನೆಯೊಂದರಲ್ಲಿ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸೋಮವಾರ ತಿಳಿದುಬಂದಿದೆ.

(Kannada News) : ಮಂಗಳೂರು (ಮೂಲ್ಕಿ):  ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ,  ಗಂಡ ಹೆಂಡತಿ ಸೇರಿ ಮಗುವು ಸಹ ಪ್ರಾಣ ಕಳೆದುಕೊಂಡಿರುವುದು ವಿಪರ್ಯಾಸ.

ಪಡುಪಣಂಬೂರು ಪ್ರದೇಶದ ಕಲ್ಲಾಪು ರೈಲ್ವೆ ಗೇಟ್ ಬಳಿ ಬಾಡಿಗೆ ಮನೆಯೊಂದರಲ್ಲಿ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸೋಮವಾರ ತಿಳಿದುಬಂದಿದೆ.

ಮೃತರನ್ನು ವಿನೋದ್ ಸಾಲ್ಯಾನ್ (40), ರಚನಾ (38) ಮತ್ತು ಮಗು ಸಾಧ್ಯ (8) ಎಂದು ಗುರುತಿಸಲಾಗಿದೆ. ಮೃತ ವಿನೋದ್ ಸಾಲ್ಯಾನ್ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಅವರು ಒಂದು ವರ್ಷದ ಹಿಂದೆ ಕಲ್ಲಾಪುಗೆ ಬಂದು ಪತ್ನಿ ಮತ್ತು ಮಗುವಿನೊಂದಿಗೆ ಇಂದಿರಾ ಎಂಬುವವರ ಒಡೆತನದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಮತ್ತು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು.

ಕಳೆದ ಎರಡು ದಿನಗಳಿಂದ ಯಾರೂ ಮನೆಯಿಂದ ಹೊರಬರದ ಕಾರಣ ಸ್ಥಳೀಯರು ಕಿಟಕಿಯ ಮೂಲಕ ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಇವರು ಶನಿವಾರ ರಾತ್ರಿ ವಿಷ ಸೇವಿಸಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಮೂಲ್ಕಿ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಪೋಸ್ಟ್ ಮಾರ್ಟಮ್ ಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.

Web Title : real estate family commits suicide in Mangalore

Scroll Down To More News Today