Crime News, ಅನಂತಪುರದಲ್ಲಿ ರಸ್ತೆ ಅಪಘಾತ, ನಾಲ್ವರು ಸಾವು
ಆಂಧ್ರಪ್ರದೇಶ : ಅನಂತಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಗುಮ್ಮಗಟ್ಟಾ ವಲಯದ ಪುಲಕುಂಟಾದಲ್ಲಿ ಜೀಪು ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ರಾಯದುರ್ಗ ಕಡೆಯಿಂದ ಹೋಗುತ್ತಿದ್ದ ಆಟೋ ಗೋನಬಾವಿ ಕಡೆಯಿಂದ ಬರುತ್ತಿದ್ದ ಜೀಪಿಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಮೃತರನ್ನು ಗೊಲ್ಲ ಮಹೇಂದ್ರ (4), ರಕ್ಷಿತಾ (5), ನಾಗಮ್ಮ (60) ಮತ್ತು ಶೇಖರ್ (20) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ರಾಯದುರ್ಗ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಎಸ್ಸೈ ತಿಪ್ಪಯ್ಯ ನಾಯಕ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.



